ಕಾಂಗ್ರೆಸ್ ನಾಯಕರ ಪ್ರತಿಭಟನೆ ರಾಜಧಾನಿಯಲ್ಲಿ ಧಗ ಧಗ

Webdunia
ಗುರುವಾರ, 21 ಜುಲೈ 2022 (17:03 IST)
ಕಾಂಗ್ರೆಸ್‌ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಇ.ಡಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ, ಕಾಂಗ್ರೆಸ್‌ ಪಕ್ಷ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು:
ಕಳೆದ ತಿಂಗಳು ರಾಹುಲ್‌ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಕರೆದಾಗ ಇಡಿ ಕಚೇರಿ ವರೆಗೆ ಪ್ರತಿಭಟನೆ ಇಟ್ಟುಕೊಂಡು, ಅದಕ್ಕೆ ಮುತ್ತಿಗೆ ಹಾಕುವ ಕೆಲಸವನ್ನು ಮಾಡಿದ್ದೆವು. ಈಗ ಮತ್ತೆ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಇಡಿ ಕರೆಸಿಕೊಂಡು ವಿಚಾರಣೆ ಮಾಡುತ್ತಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಕರೆದರೆ ಕಾಂಗ್ರೆಸ್‌ ಯಾಕೆ ಹೆದರಿಕೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದವರು ದೇಶದ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ.
 
ನಾವ್ಯಾರು ದೇಶದ ಕಾನೂನಿಗಿಂತ ದೊಡ್ಡವರಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಸ್ವಾಯತ್ತ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ ಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್‌ ಪಕ್ಷದ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಇರುವುದು ಎರಡೇ ರಾಷ್ಟ್ರೀಯ ಪಕ್ಷಗಳು. ಕಮ್ಯುನಿಷ್ಟ್‌ ಪಕ್ಷ ರಾಷ್ಟ್ರೀಯ ಪಕ್ಷವಾದರೂ ತಮ್ಮನ್ನು ಚುನಾವಣೆಯಲ್ಲಿ ಸೋಲಿಸುವ ಶಕ್ತಿ ಇರುವುದು ಕಾಂಗ್ರೆಸ್‌ ಗೆ ಮಾತ್ರ ಎಂಬುದು ಬಿಜೆಪಿ ಅವರಿಗೆ ಗೊತ್ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಬಿಸಿಲು ಇಲ್ಲ, ಹವಾಮಾನದಲ್ಲಿ ಮಹತ್ವದ ಬದಲಾವಣೆ

ದರ ಏರಿಕೆ ಗಲಾಟೆ ನಡುವೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಯದುವೀರ್ ಒಡೆಯರ್ Video

ಹೆಣ್ಮಕ್ಳಿಗೆ ಬಸ್ ಫ್ರೀ ಮಾಡಿ ಗಂಡಸರಿಗೆ ಜಾಗವೇ ಇಲ್ಲದಂತಾಗಿದೆ: ಶಕ್ತಿ ಯೋಜನೆ ಬಗ್ಗೆ ಆರ್ ವಿ ದೇಶಪಾಂಡೆ ವಿಡಿಯೋ ವೈರಲ್ Video

ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಮೆಟ್ರೋ ದರ ಏರಿಕೆಗೆ ಇವರೇ ಕಾರಣ: ತೇಜಸ್ವಿ ಸೂರ್ಯ ಮತ್ತೆ ವಾಗ್ದಾಳಿ

ಬಿಎಂಟಿಸಿ ಬಸ್ ನಲ್ಲಿ ಕಳೆದುಹೋಗಿದ್ದ ಬ್ಯಾಗ್ ಮರಳಿ ಪಡೆದ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments