Publish Date: Thu, 14 Apr 2022 (20:11 IST)
Updated Date: Thu, 14 Apr 2022 (20:13 IST)
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರೇರಣೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ರು. ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕರು ಈ ಮೊದಲೇ ಘೋಷಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿತ್ತು. ಭದ್ರತೆಗೆ 250ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಭವನದಿಂದ ಸಿಎಂ ಸರ್ಕಾರಿ ನಿವಾಸದವರೆಗೆ ಱಲಿ ನಡೆಸಲಾಯ್ತು. ಆನಂತರ ಕಾಂಗ್ರೆಸ್ ನಾಯಕರನ್ನ ಬಂಧಿಸಿ ಬಿಡುಗಡೆ ಮಾಡಲಾಯ್ತು.