ಜೆಡಿಎಸ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಕಾಂಗ್ರೆಸ್

Webdunia
ಶನಿವಾರ, 16 ಮಾರ್ಚ್ 2019 (16:37 IST)
ಚುನಾವಣೆ ಕಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದು ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೆಡಿಎಸ್ ವಿರುದ್ಧ  ಪ್ರತಿಭಟನೆ ನಡೆಸಲಾಗಿದೆ. ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ತುಮಕೂರು ಕ್ಷೇತ್ರವನ್ನ ಕಾಂಗ್ರೆಸ್ ಬಿಟ್ಟು ಕೊಡುವಂತೆ ಆಗ್ರಹ ಮಾಡಿದ ಧರಣಿ ನಿರತರು, ಮುದ್ದಹನುಮೇಗೌಡರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದ್ರು.

ತುಮಕೂರಿಗೆ ರಾಹುಲ್ ಗಾಂಧಿ ಬಂದರೆ ಸ್ವಾಗತ ಕೋರಲಾಗುವುದು. ನಮ್ಮ ಜಿಲ್ಲೆಯಲ್ಲಿ ಜೆಡಿಎಸ್ ಇಲ್ಲಾ. ಕಾಂಗ್ರೆಸ್ ಮಾತ್ರ ಇರೋದು ಎಂದ್ರು.

ಜೆಡಿಎಸ್ ನವರು 8 ಕ್ಷೇತ್ರ ಕೇಳಿದ್ದಾರೆ. ಅವರು 7 ಕೊಟ್ರು ತಗೊತ್ತಾರೆ. 5 ಕೊಡ್ರಿ ತಗೋತಾರೆ. ಅವರಿಗೆ ಬೇಕಿರೋದು ಅಪ್ಪ ಮಕ್ಕಳು, ಮೊಮ್ಮಕ್ಕಳಿಗೆ. ಅವರ ಕುಟುಂಬಕ್ಕೆ ಕೊಟ್ಟಿರೋದು ಸಾಕು, ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತುಮಕೂರನ್ನ ಜೆಡಿಎಸ್ ಗೆ ಬಿಟ್ಟು ಕೊಡು ಅನ್ನೋದು ಯಾವ ನ್ಯಾಯ? ಎಲ್ಲವೂ ಜೆಡಿಎಸ್ ಗೆ ಇರಬೇಕಾ..? ಜೆಡಿಎಸ್ ಗೆ ಕೊಟ್ರೆ ನಾವು ಗೆಲ್ಲಿಸೋದಿಲ್ಲಾ. ಕಾಂಗ್ರೆಸ್ ಗೆಲ್ಲಿಸ್ತೀವಿ ಎಂದು ಹೇಳಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments