Publish Date: Wed, 22 Jun 2016 (13:05 IST)
Updated Date: Wed, 22 Jun 2016 (13:07 IST)
ಗಾಲ್ಫ್ ರಸ್ತೆಯಲ್ಲಿರುವ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿವಾಸದಲ್ಲಿ ಅತೃಪ್ತ ಶಾಸಕರ ಮಹತ್ವ ಸಭೆ ನಡೆದಿದ್ದು ಸಮಾನ ಮನಸ್ಕ ವೇದಿಕೆಯ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿ ಶ್ರೀನಿವಾಸ್ ಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಖಮರುಲ್ ಇಸ್ಲಾಂ, ಎಸ್,ಟಿ.ಸೋಮಶೇಖರ್, ಡಾ.ಎ.ಬಿ ಮಲಕರೆಡ್ಡಿ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು. ಹೈಕಮಾಂಡ್ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ಕಾದು ನೋಡೋಣ ಎಂದು ಕೆಲ ಶಾಸಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಅತೃಪ್ತ ಶಾಸಕರು ತಿಳಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮಾಜಿ ಸಚಿವ ಖಮರುಲ್ ಇಸ್ಲಾಂ ಆಕ್ರೋಶ ವ್ಯಕ್ತಪಡಿಸಿ, ಖರ್ಗೆ ಸ್ವಾರ್ಥಕ್ಕಾಗಿ ನನ್ನನ್ನು ಬಲಿಕೊಡಲಾಯಿತು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ವರ್ತನೆಯ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು ಎಂದು ಮಾಜಿ ಸಚಿವ ಎ.ಬಿ.ಮಲಕರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ