Publish Date: Sat, 15 Sep 2018 (16:25 IST)
Updated Date: Sat, 15 Sep 2018 (16:27 IST)
ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಕಾಂಗ್ರೆಸ್ ಪಕ್ಷದ ಭಿನ್ನಮತ ಶಮನಗೊಂಡಿದೆ ಎಂದುಕೊಳ್ಳುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಜಾರಕಿಹೋಳಿ ಪಕ್ಕದಲ್ಲಿ ಕುಳಿತದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಲೇಟಾಗಿ ಬಂದಿದ್ದೇನೆ ಕುರ್ಚಿ ಖಾಲಿ ಇತ್ತು ಕುಳಿತಿದ್ದೇನೆ ಎಂದರು.
ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಪಕ್ಷದ ಆಂತರಿಕ ಭಿನ್ನಮತ ಮುಗಿಯಬೇಕಾಗಿದೆ ಮುಗಿದಿದೆ ಎಂದುಕೊಳ್ಳುತ್ತೇನೆ ಎಂದು ಹೇಳಿದರು.