Select Your Language

Notifications

webdunia
webdunia
webdunia
webdunia

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

CM Siddaramaiah

Sampriya

ಬೆಂಗಳೂರು , ಶುಕ್ರವಾರ, 3 ಅಕ್ಟೋಬರ್ 2025 (15:03 IST)
ಬೆಂಗಳೂರು: ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records  - World Record of Excellence ಗೆ ಸೇರ್ಪಡೆಗೊಂಡು ಮತ್ತೊಂದು ಮೈಲಿಗಲು ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ವಿಚಾರವನ್ನು ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು
International Book of Records  - World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್‌ 11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ. 

ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ. 

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ,ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು.

Share this Story:

Follow Webdunia kannada

ಮುಂದಿನ ಸುದ್ದಿ

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ