Publish Date: Mon, 26 Jun 2017 (13:24 IST)
Updated Date: Mon, 26 Jun 2017 (13:26 IST)
ಲೋಕಸಭೆಯಲ್ಲಿ ಹುಡುಕಿದರೂ ಕಾಂಗ್ರೆಸ್ ಸಂಸದರು ಕಾಣಿಸಬಾರದು. ಅಂತಹ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ತುರ್ತುಪರಿಸ್ಥಿತಿಯ ಕರಾಳ ನೆನಪು ಕುರಿತು ಪಕ್ಷದ ಕಚೇರಿಯಲ್ಲಿ ಆಯೋಜಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಯಪ್ರಕಾಶ್ ನಾರಾಯಣ್‌ರನ್ನು ಜೈಲಿನಲ್ಲಿಟ್ಟು ಕೊಂದಿದ್ದೇ ಕಾಂಗ್ರೆಸ್ಸಿಗರು ಎಂದು ಆಕ್ರೋಷ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ 70 ವರ್ಷಗಳ ಅವಧಿಯಲ್ಲಿ ಭ್ರಷ್ಟಾಚಾರ ಹೆಮ್ಮರವಾಗಿ ಬೆಳೆದಿದೆ. ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಲು ಕಾಂಗ್ರೆಸ್ ಪಕ್ಷದವರೇ ಕಾರಣವಾಗಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ ಮುಕ್ತ ಕಾಂಗ್ರೆಸ್ ಮಾಡುವುದೇ ಬಿಜೆಪಿ ಪಕ್ಷದ ಪ್ರಮುಖ ಗುರಿಯಾಗಿದೆ. ಮುಂಬರುವ ಚುನಾವಣೆಯಲ್ಲಿ ಭ್ರಷ್ಟ ಸರಕಾರದ ವಿರುದ್ಧ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.