ಬೆಂಗಳೂರು: ಮುಂದಿನ 10ವರ್ಷ ನಾವೇ ಅಧಿಕಾರದಲ್ಲಿರುತ್ತೇವೆ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು 10 ತಿಂಗಳು ಸರ್ಕಾರ ನಡೆಸಲಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸವಾಲ್ ಹಾಕಿದ್ದಾರೆ.
ಇಂದು ಮುಡಾ ಹಗರಣ ವಿರುದ್ಧ ಜೆಡಿಎಸ್ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಪಾಪದ ಕೊಡ ತುಂಬಿದ್ದು, ನಮ್ಮ ಪಾದಯಾತ್ರೆಮೈಸೂರು ತಲಪುವವರೆಗೆ ಈ ಸರ್ಕಾರದ ವಿಕೆಟ್‌ಗಳು ಬೀಳಬೇಕು. ಅದು ನಾಯಕನಿಂದಲೇ ಶುರುವಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಡಾ ಸರ್ಕಾರದ ಆಸ್ತಿಯಾಗಿದ್ದು, ಸಿಎಂ ಅವರೇ ಅದನ್ನು ನಿಮ್ಮ ಬಾಮೈದನ ಹೆಸರಿಗೆ ಮಾಡಲು ಅವಕಾಶ ಇದೆಯಾ? ಇದನ್ನ ಅಂಬೇಡ್ಕರ್ ಸಂವಿಧಾನದಲ್ಲಿ ಬರೆಯಲಾಗಿದ್ಯಾ? ಸರ್ಕಾರದ ಜಮೀನನ್ನ ನಿಮ್ಮ ಬಾಮೈದನ ಹೆಸರಿಗೆ ಹೇಗೆ ದಾಖಲಾತಿ ಮಾಡಿಕೊಟ್ಟರು. ಸಿದ್ದರಾಮಯ್ಯ ನನಗೆ ಇದ್ಯಾವುದು ಗೊತ್ತಿಲ್ಲ ಎನ್ನುತ್ತಾರೆ. 64 ಕೋಟಿ ಕೊಡಿ ಎನ್ನುತ್ತಿರಾ. ಅಲ್ಲಿ ನಡೆದ ಘಟನೆ ನಿಮ್ಮ ಗಮನಕ್ಕೆ ಬಾರದೇ ಆಗಿದೆಯಾ? ನಿಮ್ಮ ಪ್ರಭಾವ ಬೀರದೇ ಇಲ್ಲ ಎನ್ನುವುದಕ್ಕೆ ಸಾಧ್ಯವಿದೆಯಾ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಿ ಹರಿಹಾಯ್ದರು.<>