Select Your Language

Notifications

webdunia
webdunia
webdunia
webdunia

ಸಿಟಿ ರವಿ ಹಾಗೂ ಸಂಸದ ಪ್ರತಾಪ ಸಿಂಹ ವಿರುದ್ಧ ಕಾಂಗ್ರೆಸ್ ಕಿಡಿ

ಸಿಟಿ ರವಿ ಹಾಗೂ ಸಂಸದ ಪ್ರತಾಪ ಸಿಂಹ ವಿರುದ್ಧ ಕಾಂಗ್ರೆಸ್ ಕಿಡಿ
bangalore , ಬುಧವಾರ, 14 ಜೂನ್ 2023 (14:12 IST)
ಹೊಂದಾಣಿಕೆ ರಾಜಕಾರಣದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆ ವಿಚಾರವಾಗಿ ಸಿಟಿ ರವಿ ಹಾಗೂ ಸಂಸದ ಪ್ರತಾಪ ಸಿಂಹ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.ರಿಟೈರ್ಡ್ ಹರ್ಟ್ ಆಗಿರುವ @CTRavi_BJP ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.ಅವರ ಅರಣ್ಯ ರೋಧನಕ್ಕೆ @mepratap ದನಿ ಜೋಡಿಸಿದ್ದಾರೆ.
 
ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ.ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ..?ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ.ಬೊಮ್ಮಾಯಿ ಹಾಗೂ @BSYBJP ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ @mepratap @CTRavi_BJP ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ.ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಾಯಕರ ಹೇಳಿಕೆ ಹಿನ್ನೆಲೆಯಲ್ಲಿ ಕಾಲೆಳೆದ ಕಾಂಗ್ರೆಸ್