Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಕೃಪಾಪೋಷಿತ ವಕ್ಫ್ ಲ್ಯಾಂಡ್ ಜಿಹಾದ್‌ಗೆ ಧಿಕ್ಕಾರ ಧಿಕ್ಕಾರ

Congress Government, Waqf Board Issue, Opposition Leader R Ashok

Sampriya

ಬೆಂಗಳೂರು , ಶುಕ್ರವಾರ, 22 ನವೆಂಬರ್ 2024 (17:38 IST)
Photo Courtesy X
ಬೆಂಗಳೂರು: ರಾಜ್ಯದ ರೈತರ, ಬಡವರ, ಮಠ - ಮಂದಿರಗಳ ಜಮೀನುಗಳನ್ನು ಅಕ್ರಮವಾಗಿ ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಕಬಳಿಸುತ್ತಿದೆ ಎಂದು ಆರೋಪಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನಲ್ಲಿ ʻನಮ್ಮ ಭೂಮಿ ನಮ್ಮ ಹಕ್ಕುʼ ಬೃಹತ್‌ ಆಂದೋಲನ ನಡೆಯಿತು.

ವಕ್ಫ್ ಮಂಡಳಿ  ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ವಿಶ್ವವಿಖ್ಯಾತ ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ ಎಂದು ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,
 , ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ , ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ
 , ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಿಪಂ ಸದಸ್ಯೆಯ ರೇಪ್‌ ಕೇಸ್‌: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ