Select Your Language

Notifications

webdunia
webdunia
webdunia
webdunia

ಹಿತಶತ್ರುಗಳ ಜೊತೆ ಸೇರಿ ಕಾಂಗ್ರೆಸ್ ಷಡ್ಯಂತ್ರ

Congress strategy with allies
bangalore , ಸೋಮವಾರ, 18 ಏಪ್ರಿಲ್ 2022 (18:54 IST)
ಅಧಿಕಾರಕ್ಕೆ ಬಂದೇಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರ ಜೊತೆ ಕೆಲ ಹಿತಶತ್ರುಗಳು ಕೈ ಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲಾ ಮಾಹಿತಿ ಇದೆ. ಇವರ ಮುಖವಾಡಗಳನ್ನು ಕಳಚಿ ಬೆತ್ತಲು ಮಾಡುವ ದಿನ ದೂರವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಒಳ್ಳೆ ಕೆಲಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲು ಕಾಂಗ್ರೆಸ್‍ಗೆ ಯಾವ ನೈತಿಕತೆ ಇದೆ. ಹಗರಣಗಳ ಭೂತವನ್ನು ಬೆನ್ನಿಗೆ ಕಟ್ಟಿಕೊಂಡಿರುವ ಇವರ ಬಯಲಾಟವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇನ್ನಾದರೂ ರಚನಾತ್ಮಕ ಚಟುವಟಿಕೆಗಳ ಮೂಲಕ ಜನರ ಮುಂದೆ ಹೋಗಲಿ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

'ದುರ್ಬಲ ವರ್ಗದ ಬೆಂಬಲ ನಮಗಿದೆ'