Publish Date: Sat, 22 Oct 2016 (17:06 IST)
Updated Date: Sat, 22 Oct 2016 (17:09 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರಿಗೆ ಗೇಟ್‌ಪಾಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತಿರುಗೇಟು ನೀಡಿದೆ.
ಶ್ರೀನಿವಾಸ್ ಪ್ರಸಾದ್ ಅವರ ಕಟ್ಟಾ ಬೆಂಬಲಿಗರಾದ ನಂಜನಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ ಹಾಗೂ ಹಲ್ಲಹಳ್ಳಿಯ ಕಾಂಗ್ರೆಸ್ ಅಧ್ಯಕ್ಷ ಮಹಾದೇವಪ್ಪ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡು ಅತೃಪ್ತರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಅವರು ಅ.17 ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ಅವರ ತವರು ಕ್ಷೇತ್ರ ನಂಜನಗೂಡಿನಲ್ಲಿ ಉಪಚುನಾವಣೆ ನಡೆಯುವುದು ಅನಿವಾರ್ಯವಾಗಿದೆ. ಕಾಂಗ್ರೆಸ್‌ಗೆ ಇದು ಪ್ರತಿಷ್ಠೆಯ ಉಪಚುನಾವಣೆಯಾಗಿದ್ದು, ನಂಜನಗೂಡಿನಲ್ಲಿ ಕಾಂಗ್ರೆಸ್ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ