Publish Date: Tue, 09 Jan 2018 (19:41 IST)
Updated Date: Tue, 09 Jan 2018 (19:43 IST)
ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಭರವಸೆ ದೊರೆತಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಬಜೆಟ್ ಅಧಿವೇಶನ ನಂತರ ಫೆಬ್ರುವರಿ ತಿಂಗಳಾಂತ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇವೆ ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೂಡ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದಲೂ ಟಿಕೆಟ್ ಭರವಸೆ ಸಿಕ್ಕಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸರ್ಧೆ ಮಾಡಲಾಗುತ್ತದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.