ಕಾಂಗ್ರೆಸ್ ಪಕ್ಷ ಮೂಲೆಗುಂಪು ಶೀಘ್ರದಲ್ಲೇ - ನಳಿನ್ ಕುಮಾರ್ ಕಟಿಲ್

Webdunia
ಗುರುವಾರ, 6 ಅಕ್ಟೋಬರ್ 2022 (15:11 IST)
ಕಾಂಗ್ರೆಸ್ ಪಕ್ಷ ಶಾಶ್ವತವಾಗಿ ಮೂಲೆಗುಂಪಾಗುವ ಸಮಯ ಸನಿಹದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಜಾತಿಗಳ ನಡುವೆ, ಮತೀಯ ಸಂಘರ್ಷ ಹೆಚ್ಚಿಸುವ ಪಕ್ಷವಾದರೆ, ಬಿಜೆಪಿ ಸದಾ ಜನಹಿತ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಎಂಬುದು ಜನರಿಗೆ ಅರಿವಾಗಿದೆ.
ಕಾಂಗ್ರೆಸ್ ಪಕ್ಷದ ಆರು ದಶಕಗಳ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳನ್ನು ಗಮನಿಸಿದ ಮಹಾಜನತೆ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಮೂಲೆಗುಂಪು ಮಾಡುವ ನಿರ್ಧಾರ ಮಾಡಿದ್ದಾರೆ.
 
ರಾಹುಲ್ ಗಾಂಧಿಯವರು ಭಾರತ್ ಜೋಡೋ ಮೂಲಕ ಕರ್ನಾಟಕಕ್ಕೆ ಪ್ರವೇಶ ಮಾಡುವ ಸಂದರ್ಭದಲ್ಲೇ ಇಲ್ಲಿನ ಕಾಂಗ್ರೆಸ್ ಮುಖಂಡರು ಎರಡು ತಂಡಗಳಾಗಿ ಸ್ವಾಗತ ಮಾಡಿದ್ದಾರೆ. ಮುಖ್ಯಮಂತ್ರಿ ಕುರ್ಚಿಯ ಹಗಲುಕನಸು ಕಾಣುವ ಸಿದ್ದರಾಮಯ್ಯ ಒಂದೆಡೆ ಸ್ವಾಗತ ಕೋರಿದರೆ, ಜೈಲಿನತ್ತ ಮುಖ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಮತ್ತು ಹಗರಲಿರುಳೂ ಸಿಎಂ ಕುರ್ಚಿಯ ತಿರುಕನ ಕನಸು ಕಾಣುವ ಡಿ.ಕೆ.ಶಿವಕುಮಾರ್ ಮತ್ತೊಂದೆಡೆ ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ್ದಾರೆ. ಇದು ಕಾಂಗ್ರೆಸ್ ಭಿನ್ನಮತಕ್ಕೆ ಸ್ಪಷ್ಟ ನಿದರ್ಶನ. ಇದನ್ನು ಜನತೆ ಗಮನಿಸಿದ್ದಾರೆ ಎಂದು ಕಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments