Select Your Language

Notifications

webdunia
webdunia
webdunia
webdunia

ಮೋದಿ, ಅಮಿತ್ ಶಾ ವಿರುದ್ಧ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ದೂರು

ಪ್ರಧಾನಿ ಮೋದಿ
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಜನರನ್ನು ತಪ್ಪು ದಾರಿಗೆಳೆಯುವ ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಇಂದು ಬೆಳಿಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದೆ.

ಬೆಳಿಗ್ಗೆ 10.30 ಕ್ಕೆ ದೆಹಲಿಯ ಅಶೋಕ ರಸ್ತೆಯಲ್ಲಿರುವ ಕೇಂದ್ರ ಚುನಾವಣಾ ಆಯೋಗಕ್ಕೆ ತೆರಳಲಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ದೂರು ನೀಡಲಿದ್ದಾರೆ.

ಎದುರಾಳಿ ಪಕ್ಷದ ನಾಯಕರ ನಿಂದನೆಯ ಭಾಷಣದ ಮೇಲೆ ಕಾಂಗ್ರೆಸ್ ದೂರು ನೀಡಲಿದೆ. ಅಮಿತ್ ಶಾ ಕೇಂದ್ರದ ಅನುದಾನದ ಬಗ್ಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಪ್ರಧಾನಿ ಮೋದಿ ನೆಹರು ಕುಟುಂಬದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬುದು ಕಾಂಗ್ರೆಸ್ ದೂರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇದೇ ಕೊನೆಯ ಬಾರಿ ಒಮ್ಮೆ... ಎನ್ನುತ್ತಾ ಭಾವುಕರಾದ ಸಿಎಂ ಸಿದ್ದರಾಮಯ್ಯ!