Publish Date: Thu, 26 Oct 2017 (16:40 IST)
Updated Date: Thu, 26 Oct 2017 (16:42 IST)
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಾವುದೇ ರೀತಿಯ ರಣತಂತ್ರ ರೂಪಿಸಿದರು ಕಾಂಗ್ರೆಸ್ ಪಕ್ಷ ಗುಜರಾತ್ನಲ್ಲಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿ ಅದಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದ್ದಾರೆ.
ಗುಜರಾತ್ ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಪಕ್ಷ ರೈತರ, ಜನಪರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.