Webdunia - Bharat's app for daily news and videos

Install App

ನಟಿ ಶ್ರುತಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಿರುವ ಕಾಂಗ್ರೆಸ್

Krishnaveni K
ಗುರುವಾರ, 25 ಏಪ್ರಿಲ್ 2024 (15:38 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ, ಬಿಜೆಪಿ ನಾಯಕಿ ಶ್ರುತಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.

ಬಿಜೆಪಿ ಸಮಾವೇಶವೊಂದರಲ್ಲಿ ಶ್ರುತಿ ಮಾಡಿದ ಭಾಷಣ ಮಹಿಳೆಯರನ್ನು ಅವಮಾನಿಸುವ ರೀತಿಯಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ. ಈ ಬಗ್ಗೆ ಇಂದು ಸಂಜೆ  4.15 ಕ್ಕೆ ಕಾಂಗ್ರೆಸ್ ನಿಯೋಗ ಕಾವೇರಿ ಭವನದಲ್ಲಿರುವ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಲಿದೆ.

ನಟಿ ಶ್ರುತಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವಾಗ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನುವುದು ಅವರ ಮೇಲಿನ ಆರೋಪವಾಗಿದೆ. ಕಾಂಗ್ರೆಸ್ ಸರ್ಕಾರ ಬಸ್ ಟಿಕೆಟ್ ಫ್ರೀ ಮಾಡಿದ ಮೇಲೆ ಮಹಿಳೆಯರು ಎಲ್ಲೆಲ್ಲೋ ತಿರುಗಾಡುತ್ತಿದ್ದಾರೆ. ಮನೆಯಲ್ಲಿ ಗಂಡ, ಮಕ್ಕಳು ಅಳುತ್ತಿದ್ದಾರೆ ಎಂದು ಶ್ರುತಿ ಹೇಳಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು.

ಇದರ ಬಗ್ಗೆ ಇದೀಗ ಕಾಂಗ್ರೆಸ್ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದೆ. ಶ್ರುತಿ ನೀಡಿರುವ ಹೇಳಿಕೆ ಕೇವಲ ಕಾಂಗ್ರೆಸ್ ನ ಯೋಜನೆ ಟೀಕಿಸಿರುವುದು ಮಾತ್ರವಲ್ಲ, ಇದು ಇಡೀ ಮಹಿಳಾ ಸಮುದಾಯಕ್ಕೇ ಮಾಡಿದ ಅವಮಾನ ಎಂದು ಕಾಂಗ್ರೆಸ್ ಆಕ್ಷೇಪಿಸಿದೆ. ಈ ಬಗ್ಗೆ ಶ್ರುತಿ ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಪರ-ವಿರೋಧ ಕಾಮೆಂಟ್ ಗಳು ಬಂದಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments