ಬೆಂಗಳೂರು: ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಇದೀಗ ಕಾಂಗ್ರೆಸ್ ನಾಯಕರು ಗೋ ಬ್ಯಾಕ್ ಗವರ್ನರ್ ಎಂಬ ಅಭಿಯಾನ ಆರಂಭಿಸಲು ಹೊರಟಿದೆ.
ರಾಜ್ಯಪಾಲರು ನಿನ್ನೆ ಅಧಿವೇಶನದಲ್ಲಿ ಮನ್ರೇಗಾ ಯೋಜನೆ ಟೀಕಿಸಿ ಬರೆದಿದ್ದ ಅಂಶಗಳನ್ನೊಳಗೊಂಡ ಸರ್ಕಾರ ಬರೆದುಕೊಟ್ಟ ಭಾಷಣ ಓದಿರಲಿಲ್ಲ. ಇದರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲೇ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿತ್ತು.
ಇದರ ಬೆನ್ನಲ್ಲೇ ಸಿಎಂ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೂ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಪಾಲರು ಸರ್ಕಾರದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇದರ ಬೆನ್ನಲ್ಲೇ ಇಂತಹ ರಾಜ್ಯಪಾಲರ ಅಗತ್ಯ ನಮಗಿಲ್ಲ. ಗೋ ಬ್ಯಾಕ್ ಗವರ್ನರ್ ಎಂದು ಅಭಿಯಾನವನ್ನೇ ಆರಂಭಿಸಲು ಮುಂದಾಗಿದ್ದಾರೆ. ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯನ್ನು ಮರೆತು ಒಂದು ಪಕ್ಷಕ್ಕೆ ನಿಷ್ಠರಾಗಿರಬಾರದು ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.