Publish Date: Wed, 03 Mar 2021 (09:22 IST)
Updated Date: Wed, 03 Mar 2021 (09:24 IST)
ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಕಾಂಗ್ರೆಸ್ ಈ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ.
ಇದುವರೆಗೆ ಪರಸ್ಪರ ಶೀತಲ ಸಮರ ನಡೆಸುತ್ತಿದ್ದ ಡಿಕೆ ಶಿವಕುಮಾರ್-ಸಿದ್ದರಾಮಯ್ಯ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ವಿಚಾರವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ವಿರುದ್ಧ ಹೋರಾಡಲು ಪ್ರಮುಖ ಅಸ್ತ್ರವಾಗಲಿದೆ.
ಇನ್ನು, ಯುವ ಕಾಂಗ್ರೆಸ್ ಈಗಾಗಲೇ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದೆ. ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಬಿಜೆಪಿಯನ್ನು ಲೇವಡಿ ಮಾಡಿದೆ. ಇದರ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಒತ್ತಾಯಿಸಿದೆ.
ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಳಿಸಲು ಪ್ರಮುಖ ಕಾರಣರಾಗಿದ್ದವರು ರಮೇಶ್ ಜಾರಕಿಹೊಳಿ. ಈಗ ಅವರ ರಾಸಲೀಲೆ ಬಹಿರಂಗವಾಗಿರುವುದರಿಂದ ಕಾಂಗ್ರೆಸ್ ಗೆ ತಕ್ಕ ಅಸ್ತ್ರ ಸಿಕ್ಕಂತಾಗಿದೆ.