ಚುನಾವಣೆ ಗೆಲ್ಲಲು ಕಾಂಗ್ರೆಸ್ ಹುನ್ನಾರ: ಬೊಮ್ಮಾಯಿ

Webdunia
ಭಾನುವಾರ, 5 ಡಿಸೆಂಬರ್ 2021 (18:08 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ.
ಜನಬಲ ಇಲ್ಲದಿರುವ ಕಾರಣ ಹಣದ ಮುಖಾಂತರವೇ ಚುನಾವಣೆ ಗೆಲ್ಲಬೇಕೆಂದು ಹುನ್ನಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಆನೇಕಲ್ನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ ಜೊತೆಗೆ ಪಕ್ಷಕ್ಕೂ ನೀಡಿ, ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತೆನೆ ಅತ್ಯಂತ ಕೀಳು ಮಟ್ಟದ್ದಾಗಿದೆ. ಕಾಂಗ್ರೆಸ್ನ ನೈತಿಕತೆ ಕೆಳಮಟ್ಟಕ್ಕೆ ಇಳಿದಿರುವುದು ಬಹಳ ಸ್ಪಷ್ಟವಾಗಿದೆ. ಅನೈತಿಕವಾಗಿ ಹಣ ಖರ್ಚು ಮಾಡಿ ಗೆಲ್ಲಲು ಬಯಸಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಸರಿಯಾದ ಜಾಗವನ್ನು ತೋರಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಗೆಲ್ಲುವುದಿಲ್ಲ ಎಂದು ಅವರಿಗೆ ಮುಂಚೆಯೇ ತಿಳಿದಿತ್ತು. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದು ಲಕ್ಷ ಮನೆಗಳ ನಿರ್ಮಾಣಕ್ಕೆ ಹಣ ಒದಗಿಸಿತು. ನಮ್ಮ ಸರ್ಕಾರ 4 ಲಕ್ಷ ಗ್ರಾಮೀಣ ಪ್ರದೇಶದಲ್ಲಿ ಹಾಗೂ 1 ಲಕ್ಷ ನಗರ ಪ್ರದೇಶದಲ್ಲಿ ಮನೆ ನಿರ್ಮಿಸಲು ಕ್ರಮ ಕೈಗೊಂಡಿದೆ. ಸದರಿ ಮನೆಗಳನ್ನು ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments