Select Your Language

Notifications

webdunia
webdunia
webdunia
webdunia

ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ : ವಿಜಯೇಂದ್ರ

ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ : ವಿಜಯೇಂದ್ರ
ಬೀದರ್ , ಶುಕ್ರವಾರ, 30 ಸೆಪ್ಟಂಬರ್ 2022 (14:22 IST)
ಬೀದರ್ : ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಇಂದು ರಾಹುಲ್ ಗಾಂಧಿ ಮೂಲಕ ಮತ್ತೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ನ ಭಾರತ ಜೋಡೋ ಪಾದಯಾತ್ರೆಯ ವಿರುದ್ಧ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ತಾಲೂಕಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ಗೆ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಆಗಬೇಕು ಎಂದು ಹುಡುಕಲು ಆಗುತ್ತಿಲ್ಲ.

ಹೀಗಾಗಿ ಅವರಿಂದ ಭಾರತೀಯ ಜನತಾ ಪಾರ್ಟಿ ಹೆದರಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಏನೇ ಮಾಡಿದರೂ ಜನರು ಕಾಂಗ್ರೆಸ್ ಪಕ್ಷವನ್ನು ಮರೆತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸೇರಿದಂತೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

5.9% ರೆಪೋ ದರ ಹೆಚ್ಚಿಸಿದ RBI