Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್

ಬೆಂಗಳೂರು
ಬೆಂಗಳೂರು : ಕಾಂಗ್ರೆಸ್ ನ ಪ್ರಭಾವಿ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪರವಾಗಿ ರಾಜ್ಯ ಕಾಂಗ್ರೆಸ್ ಟ್ವೀಟ್ ವೊಂದನ್ನು ಮಾಡಿದೆ.



 

ತಿಹಾರ್ ಜೈಲಿನಿಂದ ಹೊರಬಂದು ಮರಳಿ ಬೆಂಗಳೂರಿಗೆ ಬಂದ ಡಿಕೆಶಿಗೆ ಸ್ವಾಗತ ಕೋರಿ ಮಾಡಿದ ಅದ್ಧೂರಿ ಮೆರವಣೆಗೆಯ ವೇಳೆ ಡಿಕೆಶಿ ಜೆಡಿಎಸ್ ಬಾವುಟ ಹಿಡಿದ ವಿಚಾರಕ್ಕೆ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಅಸಮಾಧಾನ ಬುಗಿಲೆದ್ದಿತ್ತು.


ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ನಮ್ಮ ಪಕ್ಷದ ಪ್ರಭಾವಿ ನಾಯಕರು. ಕಾಂಗ್ರೆಸ್ ನಾಯಕರ ಒಗ್ಗಟ್ಟು ಒಡೆಯುವಂತಹ ಕೆಲವು ಕೆಲಸಗಳು ನಡೆಯುತ್ತಲೇ ಇರುತ್ತದೆ. ಇದೆಲ್ಲದರ ನಡುವೆಯೂ ನಾಯಕರೆಲ್ಲರೂ ಒಗ್ಗಟ್ಟಾಗಿ ಮುಂದುವರೆಯುವುದಾಗಿ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಶವವಾಗಿ ಬೋರ್ ವೆಲ್ ನಿಂದ ಹೊರಗೆ ಬಂದ 2 ವರ್ಷದ ಬಾಲಕ ಸುಜಿತ್