Publish Date: Sun, 20 Nov 2022 (20:21 IST)
Updated Date: Sun, 20 Nov 2022 (20:22 IST)
ರಾಜ್ಯ ಬಿಜೆಪಿ ಆಯೋಜಿಸಿರುವ ನವಶಕ್ತಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಆರಂಭಿಸಿದೆ. ಬಿಜೆಪಿಯ ಎಸ್ಸಿ, ಎಸ್ಟಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಸಲು ತೀರ್ಮಾನಿಸಿದೆ.ಡಿಸೆಂಬರ್ 6 ರಂದು ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತೆಗಾಗಿ ಕಾಂಗ್ರೆಸ್ ನಾಯಕರ ಸಭೆ ನಗರದ ಖಾಸಗಿ ಹೋಟೆಲ್ನಲ್ಲಿ ಇಂದು ನಡೆದಿದೆ. ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಎಸ್ಸಿ, ಎಸ್ಟಿ ನಾಯಕರೊಂದಿಗೆ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ರು.