ಕಾಂಗ್ರೆಸ್‌ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ: ಬಿವೈ ವಿಜಯೇಂದ್ರ ಆಕ್ರೋಶ

Sampriya
ಗುರುವಾರ, 12 ಸೆಪ್ಟಂಬರ್ 2024 (17:00 IST)
ಬೆಂಗಳೂರು: ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ನಾಗಮಂಗಲ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ಅವರು, ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.
ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ  ಪೊಲೀಸರು  ಮುಂಜಾಗ್ರತೆಯ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ.


ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ನಮಗೆ ರಕ್ಷಣೆ ಸಿಗುತ್ತದೆ ಎಂಬ ದೃಢನಂಬಿಕೆ ವಿದ್ರೋಹಿ ಶಕ್ತಿಗಳು ವಿದ್ವಂಸಕ   ಕೃತ್ಯಗಳನ್ನು ನಡೆಸಲು ಪ್ರಚೋದನೆಯಾಗುತ್ತಿದೆ. ಜನರ ಧಾರ್ಮಿಕ ಶ್ರದ್ಧೆಯನ್ನು ಘಾಸಿಗೊಳಿಸಲು ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ.

ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸಿರುವ ಹಾಗೂ ಭಾರತೀಯ ಪರಂಪರೆಯನ್ನು ಸದಾ ಕಾಲಕ್ಕೂ ಅಪಮಾನಿಸಲು ಯತ್ನಿಸುತ್ತಿರುವ ಉಗ್ರ ಮನಸ್ಥಿತಿಯ ವಿದ್ರೋಹಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ.

ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಿಗ್ರಹಿಸದೇ ಹೋದರೆ, ಮುಂದಾಗುವ ಪರಿಣಾಮಗಳ ಹೊಣೆ ಕಾಂಗ್ರೆಸ್ ಸರ್ಕಾರವೇ ಹೊರಬೇಕಾಗುತ್ತದೆ. ಕಾಂಗ್ರೆಸ್ ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments