Publish Date: Tue, 07 Feb 2017 (10:06 IST)
Updated Date: Thu, 09 Feb 2017 (21:15 IST)
ಎಸ್.ಎಂ. ಕೃಷ್ಣ ರಾಜೀನಾಮೆ ವಿಷಯದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಇದೀಗ 6 ತಿಂಗಳು ಮುನ್ನವೇ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆಯಾ? ಎಂಬ ಸುದ್ದಿ ಕೇಳಿಬರುತ್ತಿದೆ. ನಿನ್ನೆ ನಡೆದ ಪದಾಧಿಕಾರಿಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಈ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಉಳಿದಿದ್ದು, ಒಂದೂವರೆ ತಿಂಗಳಲ್ಲಿ ಸ್ಥಳೀಯ ನಾಯಕರ ಜನಪ್ರಿಯತೆ, ಮಾಜಿ ಶಾಸಕರ ಕಾರ್ಯವೈಖರಿ ಸೇರಿದಂತೆ ಎಲ್ಲ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಖಾಸಗಿ ಸಂಸ್ಥೆಗಳಿಂದಲೂ ಸಮೀಕ್ಷೆಗೆ ನಿರ್ಧರಿಸಲಾಗಿದ್ದು, ಎರಡನ್ನೂ ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎನ್ನಲಾಗಿದೆ.