Publish Date: Wed, 29 Nov 2017 (12:33 IST)
Updated Date: Wed, 29 Nov 2017 (12:36 IST)
ಕಾಂಗ್ರೆಸ್ ಪಕ್ಷ ಮೂರು ತಿಂಗಳಲ್ಲಿ ಮನೆಗೆ ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರಕ್ಕೆ ಸಂಬಂದಿಸಿದಂತೆ ಎರಡು ಬಾರಿ ಗೋವಾ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಮನೆಗೆ ಹೋದ ನಂತರ ನಾನು ಮಹದಾಯಿ ಯೋಜನೆ ಹೊಣೆಯನ್ನು ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರಕಾರ ದೇಶದಲ್ಲಿಯೇ ಭ್ರಷ್ಟ ಸರಕಾರ. ರೈತ ವಿರೋಧಿ ಜನವಿರೋಧಿ ಸರಕಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
ಮೂರು ತಿಂಗಳ ನಂತರ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಚಿವರ ಭ್ರಷ್ಟಾಚಾರಗಳ ಬಗ್ಗೆ ತನಿಖೆಗೆ ಆದೇಶಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.