Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ: ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ: ಸುಧಾಕರ್
ಚಿಕ್ಕಬಳ್ಳಾಪುರ , ಗುರುವಾರ, 27 ಏಪ್ರಿಲ್ 2023 (12:48 IST)
ಚಿಕ್ಕಬಳ್ಳಾಪುರ : ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಂತರ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಟ್ರೆ ನಾನು ಸಹ ಅದೇ ರಕ್ತದಲ್ಲಿ ಬರೆದು ಕೊಡುತ್ತೇನೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲ್ಲ.

ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿ ಆಡಳಿತ ಮಾಡುತ್ತೇವೆ. ಕಾಂಗ್ರೆಸ್ ಮುಳುಗುವ ಹಡುಗು. ಹೀಗಾಗಿ ಡಿ.ಕೆ ಶಿವಕುಮಾರ್ ಸಹ ಬಿಜೆಪಿಗೆ ಬರುವ ದಿನಗಳು ದೂರ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

ಮೇ 13 ಬಿಜೆಪಿಯ ಶವಾಚರಣೆ ಮಾಡುತ್ತೇವೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಟಾಂಗ್ ನೀಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಅವನತಿಯಾದ ರೀತಿಯಲ್ಲೇ ಕರ್ನಾಟಕದಲ್ಲೂ ಅವನತಿಯಾಗಲಿದೆ. ಲೋಕಸಭಾ ಚುನಾವಣಾ ವೇಳೆಗೆ ಕಾಂಗ್ರೆಸ್ಗೆ ಅಭ್ಯರ್ಥಿಗಳೇ ಸಿಗಲ್ಲ ಎಂದು ವ್ಯಂಗ್ಯವಾಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ನಳಿನ್ ಕುಮಾರ್ ಕಟೀಲ್