Publish Date: Sat, 27 May 2023 (07:44 IST)
Updated Date: Fri, 26 May 2023 (19:47 IST)
ಮಂಗಳೂರು : ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು ಎಂದರು.
ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ, ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ. ಕಾಂಗ್ರೆಸ್ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ ಎಂದು ಕಿಡಿಕಾರಿದರು.