Publish Date: Sat, 30 Mar 2024 (20:36 IST)
Updated Date: Sat, 30 Mar 2024 (20:41 IST)
ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷವು ತನ್ನ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದರು.
ಮಾಧ್ಯಮದವರ ಮುಂದೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕಾರಣ ಇರುವುದು ಹೊಸದೇನಲ್ಲ. ಆದರೆ ಈ ಬಾರಿ ಅಭ್ಯರ್ಥಿಗಳ ಕೊರೆತೆಯಿಂದಾಗಿ ಕಾಂಗ್ರೆಸ್ ನಾಯಕರ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಿ, ಕಣಕ್ಕಿಳಿಸಿದೆ ಎಂದು ವ್ಯಂಗ್ಯ ಮಾಡಿದರು.
ಗದಗ-ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆ ದಿನಾಂಕವನ್ನು ನಾಳೆ ನಿರ್ಧರಿಸುವುದಾಗಿ ಹೇಳಿದರು. 28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.