ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಇಬ್ಭಾಗವಾಗಲಿದೆ: ಬಸವರಾಜ ಬೊಮ್ಮಾಯಿ

Sampriya
ಶನಿವಾರ, 30 ಮಾರ್ಚ್ 2024 (20:36 IST)
Photo Courtesy X
ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷವು ತನ್ನ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದರು.

ಮಾಧ್ಯಮದವರ ಮುಂದೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕಾರಣ ಇರುವುದು ಹೊಸದೇನಲ್ಲ. ಆದರೆ ಈ ಬಾರಿ ಅಭ್ಯರ್ಥಿಗಳ ಕೊರೆತೆಯಿಂದಾಗಿ ಕಾಂಗ್ರೆಸ್ ನಾಯಕರ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಿ, ಕಣಕ್ಕಿಳಿಸಿದೆ ಎಂದು ವ್ಯಂಗ್ಯ ಮಾಡಿದರು.

ಗದಗ-ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು  ನಾಮಪತ್ರ ಸಲ್ಲಿಕೆ ದಿನಾಂಕವನ್ನು ನಾಳೆ ನಿರ್ಧರಿಸುವುದಾಗಿ ಹೇಳಿದರು. 28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಚಿತ ಟಿಕೆಟ್ ಗೆ ಹಿಂದೂ ಹೆಸರಿನ ಆಧಾರ್ ಕಾರ್ಡ್ ತೋರಿಸಿ ವಂಚಿಸಿದ ಬುರ್ಖಾ ಧರಿಸಿದ ಮಹಿಳೆ: ವಿಡಿಯೋ ವೈರಲ್

ಪ್ರಹ್ಲಾದ್ ಜೋಶಿ, ಸೋಮಣ್ಣ ರಾಜ್ಯದಲ್ಲಿ ಹೇಗೆ ಮುಖ ತೋರಿಸುತ್ತಾರೆ: ಎಂಬಿ ಪಾಟೀಲ್

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ನೀಡಿದ ಪಾಲಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ಮುಂದಿನ ಸುದ್ದಿ
Show comments