Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ದೇಶದಲ್ಲಿ ಬೆಂಕಿಗೆ ತುಪ್ಪ ಹಾಕುತ್ತಿದೆ: ಸಿಎಂ ಬೊಮ್ಮಾಯಿ

webdunia
bengaluru , ಭಾನುವಾರ, 19 ಜೂನ್ 2022 (21:10 IST)

ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 - 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ. ಸಶಕ್ತ ಯುವಕರ ಜನಸಂಖ್ಯೆ ಯನ್ನು ಸಿದ್ದ ಮಾಡುವ ದೃಷ್ಟಿಯಿಂದ ಹಾಗೂ ಸಶಸ್ತ್ರ ಪಡೆಗಳಲ್ಲಿ ಯುವಶಕ್ತಿ ಯನ್ನು ತುಂಬುವ ಮಹತ್ವಾಕಾಂಕ್ಷೆ ಇದೆ ಎಂದು ಅವರು ಹೇಳಿದರು. 
ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರ್ಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ. ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು. 


Share this Story:

Follow Webdunia kannada

ಮುಂದಿನ ಸುದ್ದಿ

ವಿರೋಧ ಪಕ್ಷಕ್ಕೆ ವಿವೇಚನಾ ಶಕ್ತಿ ಇಲ್ಲದಂತಾಗಿದೆ:ಆರ್ ಅಶೋಕ್