Select Your Language

Notifications

webdunia
webdunia
webdunia
webdunia

ಈ ಬಾರಿ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ : ರಾಹುಲ್ ಗಾಂಧಿ

ಈ ಬಾರಿ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ  : ರಾಹುಲ್ ಗಾಂಧಿ
ಕೋಲಾರ , ಭಾನುವಾರ, 16 ಏಪ್ರಿಲ್ 2023 (14:55 IST)
ಕೋಲಾರ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡುತ್ತಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಪೂರ್ಣ ಬಹುಮತಗಳೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
 
ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ 40% ಹಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೀಳಿಸಬಹುದು. ಕಳ್ಳ ಹಣದಲ್ಲಿ ಸರ್ಕಾರವನ್ನು ಕೆಡವುವ ಕೆಲಸ ಮಾಡಬಹುದು. ಬಿಜೆಪಿ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು. 

ಮೋದಿಯವರೇ ವರದಿ ಬಿಡುಗಡೆ ಮಾಡಿ. ನೀವು ವರದಿ ಬಿಡುಗಡೆ ಮಾಡಲಿಲ್ಲ ಎಂದರೆ ಅದು ಒಬಿಸಿಗೆ ಮಾಡಿದ ಅಪಮಾನ. ನೀವು ಒಬಿಸಿ ಬಗ್ಗೆ ಮಾತನಾಡಿದಿರಿ. ಅವರ ಜನಸಂಖ್ಯೆ ಎಷ್ಟಿದೆ ಎಂದು ನಮಗೆ ಗೊತ್ತಿದೆ. ಎಸ್ಸಿ ಮತ್ತು ಎಸ್ಟಿ ಜನಸಂಖ್ಯೆಯ ಅನುಗುಣವಾಗಿ ಅವರಿಗೆ ಅವಕಾಶ ನೀಡಿ. ಮೊದಲು 50% ಮೀಸಲಾತಿ ಇರುವುದನ್ನು ತೆಗೆದು ಹಾಕಿ. ಆಗ ಓಬಿಸಿ ಬಗ್ಗೆ ಮಾತಾಡಬಹುದು. ಮೋದಿ ಅದಾನಿಗೆ ಸಹಾಯ ಮಾಡುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರ ಜನರ ಹಣ ಕದ್ದಿದೆ : ರಾಹುಲ್ ಗಾಂಧಿ