Publish Date: Thu, 16 Mar 2017 (13:30 IST)
Updated Date: Thu, 16 Mar 2017 (13:32 IST)
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸುತ್ತವೆ ಎನ್ನುವ ವಿಶ್ವಾಸವಿದೆ ಎಂದು ಆರೋಗ್ಯ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ವರ್ಷಗಳ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಸರಕಾರ ನೀಡಿದ್ದಾರೆ. ಜನಪರ, ರೈತಪರ ಯೋಜನೆಗಳನ್ನು ಘೋಷಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯವೈಖರಿಯನ್ನು ಟೀಕಿಸುವುದು ಸರಿಯಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ಜನಾರ್ದನ ಪೂಜಾರಿ ನಮ್ಮ ನಾಯಕರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಕಾದಲ್ಲಿ ಸಲಹೆ ನೀಡಲಿ ಅದನ್ನು ಬಿಟ್ಟು ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ತೊಂದರೆಯಾಗುತ್ತದೆ ಎಂದು ಸಚಿವ ಖಾದರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.