Publish Date: Mon, 09 Dec 2019 (11:31 IST)
Updated Date: Mon, 09 Dec 2019 (11:32 IST)
ಮೈಸೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಇಂದು ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸೋಮಶೇಖರ್ ಕಣಕ್ಕಿಳಿದಿದ್ದರು.
ಇದರಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಹಳ್ಳಿಹಕ್ಕಿ ವಿಶ್ವನಾಥ್ ಅವರನ್ನು ಸಿದ್ದರಾಮಯ್ಯ ಸೇನೆ ಸೆಡ್ಡು ಹೊಡೆದಿದೆ ಎನ್ನಲಾಗಿದೆ.