Select Your Language

Notifications

webdunia
webdunia
webdunia
webdunia

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಈಶ್ವರ ಖಂಡ್ರೆ ಹೇಳಿದ್ದೇನು?

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಈಶ್ವರ ಖಂಡ್ರೆ ಹೇಳಿದ್ದೇನು?
ಧಾರವಾಡ , ಶುಕ್ರವಾರ, 20 ಜುಲೈ 2018 (16:43 IST)
ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿಕೆಯಿಂದ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ. ದೇಶದ ಯುವಕರು ಕೇಂದ್ರದ ಬಿಜೆಪಿ ಸರ್ಕಾರದ ನೀತಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೇಂದ್ರ ಸರ್ಕಾರದ ಜನಪರ ಆಡಳಿತ ವಿರೋಧಿಯಿಂದ ಬೇಸತ್ತು ಹೋಗಿದ್ದಾರೆ.‌ ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

 
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ನಾನು ಕೆಪಿಸಿಸಿ ಕಾರ್ಯಾಧ್ಯಕ್ಷ ಆದ ನಂತರ ಮೊದಲ ಬಾರಿಗೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ  ಕೈಗೊಂಡಿದ್ದೇನೆ. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ನನ್ನ ಶ್ರಮ ಹಾಕುವೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ವಿಫಲರಾಗಿದ್ದೇವೆ.‌ ನಮ್ಮ ಸರ್ಕಾರದ ಜನಪರ ಕಾರ್ಯ ಜನರಿಗೆ ತಲುಪಿಸುವಲ್ಲಿ ಸಹ ಸಫಲರಾಗಲಿಲ್ಲ ಎಂದರು. ದೇಶದ ಯುವಕರು ಕೇಂದ್ರದ ಬಿಜೆಪಿ ಸರ್ಕಾರದ ನೀತಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೇಂದ್ರ ಸರ್ಕಾರದ ಜನಪರ ಆಡಳಿತ ವಿರೋಧಿಯಿಂದ ಬೇಸತ್ತು ಹೋಗಿದ್ದಾರೆ.‌ ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಮೊಗಸಾಲೆಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ಹುಟ್ಟು ಹಬ್ಬ ಆಚರಿಸಿಕೊಂಡ ಸಂಗತಿನನ್ನ ಗಮನಕ್ಕೆ ಬಂದಿಲ್ಲ. ಆಯಾ ಸ್ಥಳದ ಪವಿತ್ರತೆಯನ್ನು ಕಾಪಾಡಬೇಕು. ಸಂಬಂಧಪಟ್ಟವರು ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಬಗ್ಗೆ ಪರಿಶೀಲನೆ ನಡೆಸಲು ಹಿರಿಯರು ಹಾಗೂ ಸ್ಪೀಕರ್ ರಮೇಶ್ ಕುಮಾರ್ ಇದ್ದಾರೆ. ಬಗ್ಗೆ ಅವರೇ ಕ್ರಮ ಕೈಗೊಳ್ಳಲಿ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಅಪ್ಪುಗೆ ನೋಡಿ ನಟಿ ರಮ್ಯಾ ಭೂಕಂಪವಾಯ್ತು ಎಂದಿದ್ದು ಯಾರಿಗೆ?