Select Your Language

Notifications

webdunia
webdunia
webdunia
Tuesday, 1 April 2025
webdunia

ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ : ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ
ಬೆಂಗಳೂರು , ಶುಕ್ರವಾರ, 12 ಮೇ 2023 (21:40 IST)
ಬೆಂಗಳೂರು : ಕಾಂಗ್ರೆಸ್ನವರಿಗೆ ಬಹುಮತ ಬರಲ್ಲ. ಹೀಗಾಗಿ ಬೇರೆ ಪಕ್ಷದವರ ಜೊತೆ ಮಾತನಾಡುವ ಪ್ರಯತ್ನ ಪಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ ಎಂದು ಟಾಂಗ್ ಕೊಟ್ಟರು. 

ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದಾರೆ ವರಿಷ್ಠರು ಎಂದು ತಿಳಿಸಿದರು.

ನಾನು ಮೊದಲಿಂದಲೂ ಒಂದೇ ಮಾತು ಹೇಳ್ತಾ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತೆ. ಎಲ್ಲ ಕ್ಷೇತ್ರ, ಬೂತ್ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ನಮಗೆ ವಿಶ್ವಾಸ ಇದೆ. ಮ್ಯಾಜಿಕ್ ನಂಬರ್ ಮುಟ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಮಮತಾ, ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್