Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಕೆಲಸ : ಬೊಮ್ಮಾಯಿ ಆರೋಪ

webdunia
ಶುಕ್ರವಾರ, 22 ಅಕ್ಟೋಬರ್ 2021 (08:49 IST)
ಹಾನಗಲ್ : ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಮನುಷ್ಯ-ಮನಸ್ಸುಗಳ ಮಧ್ಯ ಅಶಾಂತಿ ಸೃಷ್ಟಿ ಮಾಡಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಅವರು ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ.ಮಕರವಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರಗಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಾತಿಗಳ ನಡುವೆ ದ್ವೇಷವನ್ನು ಬಿತ್ತಿ, ಜಾತಿಗಳಲ್ಲಿ ನೂರಾರು ಉಪಜಾತಿಗಳನ್ನು ಸೃಷ್ಟಿಮಾಡಿ ಸಮಾಜದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿದ್ದಾರೆ. ಮನುಷ್ಯರು ಮನಸುಗಳ ಮಧ್ಯೆ ಗೋಡೆಯನ್ನು ಸೃಷ್ಟಿಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪ ಮಾಡಿದರು.
ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾನಗಲ್ ಅಭಿವೃದ್ಧಿಗೆ ಕೊಡುಗೆ ಶೂನ್ಯ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಹಾವೇರಿ ಜಿಲ್ಲೆಯಲ್ಲಿ ಮೆಘಾ ಡೈರಿ, ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ: ಸಚಿವ ಎಸ್.ಟಿ.ಸೋಮಶೇಖರ್