Publish Date: Mon, 18 Jun 2018 (09:16 IST)
Updated Date: Mon, 18 Jun 2018 (09:20 IST)
ಬೆಂಗಳೂರು: ಬಿನ್ನಿಪೇಟೆ ವಾರ್ಡ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಸುರೇಶ್ ಕುಮಾರ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ನಿನ್ನೆ ರಾತ್ರಿ ಪ್ರಚಾರದ ಸಂದರ್ಭದಲ್ಲಿ ಹಲ್ಲೆ ನಡೆಸಿದ್ದು, ಸದ್ಯಕ್ಕೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದು ಮಹಿಳಾ ಮೀಸಲಾತಿ ಕ್ಷೇತ್ರವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಫೈಟ್ ಇದೆ. ಇದೀಗ ಹಲ್ಲೆ ಪ್ರಕರಣ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.