Publish Date: Mon, 03 Sep 2018 (19:47 IST)
Updated Date: Mon, 03 Sep 2018 (19:50 IST)
ಕಾಂಗ್ರೆಸ್ ಕಾರ್ಯಕರ್ತರು ಚಾಕುವಿನಿಂದ ಎಸ್ ಡಿಪಿ ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಾಕುವಿನಿಂದ ಎಸ್‌ಡಿಪಿಐ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ. ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಮೈಸೂರಿನ ಶಾಂತಿನಗರದ ರಮಚಾ ಮಸೀದಿ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಎಸ್‌ಡಿಪಿಐ ಕಾರ್ಯಕರ್ತನ ಮುಖ ರಕ್ತಸಿಕ್ತವಾಗಿದೆ. ನೂತನ ಪಾಲಿಕೆ ಸದಸ್ಯ ಅಯಾಜ್ ಪಾಷಾ ಬೆಂಬಲಿಗರಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ಇದಾಗಿದೆ. ಗಾಯಾಳು ಕಾರ್ಯಕರ್ತರು ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.