ದೇವೇಗೌಡರ ಸಭೆಯಲ್ಲಿ ಕೈ ಕಾರ್ಯಕರ್ತರ ದಾಂಧಲೆ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Sampriya
ಬುಧವಾರ, 17 ಏಪ್ರಿಲ್ 2024 (20:25 IST)
ಬೆಂಗಳೂರು: ತುಮಕೂರಿನಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡ ಅವರು ಭಾಗಿಯಾಗಿದ್ದ ಚುನಾವಣಾ ಪ್ರಚಾರ ಸಭೆಗೆ ಕಾಂಗ್ರೆಸ್‌ ಕಾರ್ಯಕರ್ತೆಯರು ನುಗ್ಗಿ ದಾಂಧಲೆ ಮಾಡಿರುವುದು ಗಂಭೀರ ಭದ್ರತಾ ಲೋಪವಾಗಿದೆ ಎಂದು ದೂರಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಕೇಂದ್ರ ಚುನಾವಣೆ ಆಯೋಗದ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ.

ಅಲ್ಲದೆ; ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಬೆಂಬಲಿಗರು ಈ ದಾಂಧಲೆ ನಡೆಸಿದ್ದಾರೆ. ತಮ್ಮ ಬೆಂಬಲಿಗರಿಗೆ ಡಿಕೆಶಿ ಅವರೇ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಲಾಗಿದೆ.

ಮಾಜಿ ಸಚಿವರಾದ ಎಸ್.‌ಸುರೇಶ್‌ ಕುಮಾರ್‌, ಜೆಡಿಎಸ್‌ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್‌, ತುಮಕೂರು ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು, ಬಿಜೆಪಿ ಕಾನೂನು ಘಟಕದ ಅಧ್ಯಕ್ಷ ವಸಂತ್‌ ಕುಮಾರ್‌, ಮುಖಂಡರಾದ ಹಿಮಾನಂದ, ದೇವರಾಜ್‌ ಅವರಿದ್ದ ನಿಯೋಗವು ಆಯೋಗಕ್ಕೆ ದೂರು ಸಲ್ಲಿಸಿದೆ.

ಇಂಥ ಘಟನೆಗಳಿಂದ ಕರ್ನಾಟಕದಲ್ಲಿ ಚುನಾವಣೆ ಶಾಂತಿಯುತವಾಗಿ ನಡೆಯುವುದಕ್ಕೆ ದೊಡ್ಡ ಬೆದರಿಕೆಯಾಗಿದೆ. ಉಪ ಮುಖ್ಯಮಂತ್ರಿ ಅವರು  ಮತದಾರರಲ್ಲಿ ದ್ವೇಷ ಭಾವನೆಯನ್ನು ಕೆರಳಿಸಿ ಶಾಂತಿ ಕದಡಲು ಪ್ರಯತ್ನ ನಡೆಸುತ್ತಿದ್ದಾರೆ. ಇದರಿಂದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ನಿರ್ಭೀತಿಯಿಂದ ಚುನಾವಣೆ ಪ್ರಚಾರ ನಡೆಸುವುದು ಕಷ್ಟವಾಗಿದೆ ಹಾಗೂ ಅವರ ಜೀವಕ್ಕೂ ಅಪಾಯವಿದೆ ಎಂದು ಮನವಿ ಪತ್ರದಲ್ಲಿ ದೂರಲಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತೆಯರು ಮಾಜಿ ಪ್ರಧಾನಿಗಳು ಹಾಜರಿದ್ದ ಸಭಾಂಗಣಕ್ಕೆ ನುಗ್ಗಿ ಗಲಭೆ ಎಬ್ಬಿಸಿದ ಸಂದರ್ಭದಲ್ಲಿ ಸ್ಥಳೀಯ ಪೋಲೀಸರು ಅವರನ್ನು ನಿಯಂತ್ರಿಸಲು ವಿಫಲರಾಗಿರುತ್ತಾರೆ. ಇದು ಗಂಭೀರ ಭದ್ರತಾ ಲೋಪವಾಗಿದೆ. ಆದ್ದರಿಂದ ಈ ಷಡ್ಯಂತ್ರ್ಯದ ಹಿಂದೆ ಇರುವ ಶಾಂತಿಘಾತುಕರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದುರುದ್ದೇಶಪೂರ್ವಕವಾಗಿ ಹಿಂಸೆಯನ್ನು ಪ್ರಚೋದಿಸಿ ಜನರಲ್ಲಿ ಭಯಭೀತಿ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಘೋಷಣೆಯಾದಾಗಿನಿಂದ ಅವರು ಮಾಡುತ್ತಿರುವ ಪ್ರಚೋದನಾತ್ಮಕ ಹಾಗೂ ದ್ವೇಷ ಕೆರಳಿಸುವ ಭಾಷಣಗಳು ಶಾಂತಿಯುವ ಚುನಾವಣೆಯನ್ನು ಹಾಳು ಮಾಡಬೇಕೆನ್ನುವ ಅವರ ಷಡ್ಯಂತ್ರ್ಯವನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ರಾಜ್ಯದ ಅಧಿಕಾರಿಗಳು ಉಪ ಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರ ಮರ್ಜಿಗೆ ತಕ್ಕಂತೆ ಕೆಲಸ ಮಾಡುತ್ತಿದ್ದು; ಯಾವುದೇ ತನಿಖೆ, ಕ್ರಮ ಕೈಗೊಳ್ಳದೇ ನಿಷ್ಕ್ರಿಯರಾಗಿದ್ದಾರೆ. ಆದ್ದರಿಂದ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು, ಇದಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಯುಕ್ತರಿಗೆ ಎನ್‌ ಡಿಎ ನಾಯಕರು ಮನವಿ ಮಾಡಿದ್ದಾರೆ.

ಇದೇ ಏಪ್ರಿಲ್ 15ರಂದು ಚುನಾವಣೆ ಆಯೋಗದ ಅನುಮತಿಯನ್ನು ಪಡೆದು ತುಮಕೂರಿನ ಕುಂಚಿಟಿಗ ಸಮುದಾಯ ಭವನದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ವಿ.ಸೋಮಣ್ಣ ಅವರ ಪರವಾಗಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರಂತೆ ಸಭಾಂಗಣದೊಳಕ್ಕೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು ದಾಂಧಲೆ ಉಂಟು ಮಾಡಿದ್ದರು ಎಂಬುದನ್ನು ಸ್ಮರಿಸಬಹುದು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments