Publish Date: Wed, 02 Aug 2017 (13:29 IST)
Updated Date: Wed, 02 Aug 2017 (13:32 IST)
ಇಂಧ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಗಾಂಧಿ ಪ್ರತಿಮೆ ಬಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಹಟಾವೋ ಭಾರತ್ ಬಚಾವೋ ಎನ್ನುವ ಘೋಷಣೆಗಳನ್ನು ಕೂಗಿದರು.
ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಕೇಂದ್ರ ಸರಕಾರಕ್ಕೆ ಧಿಕ್ಕಾರ ಎಂದು ಕೂಗಿದ ಪ್ರತಿಭಟನಾಕಾರರು, ಜನಾರ್ದನ ರೆಡ್ಡಿ 500 ಕೋಟಿ ವೆಚ್ಚ ಮಾಡಿ ಪುತ್ರಿಯ ವಿವಾಹ ಮಾಡಿದಾಗ ಯಾಕೆ ಐಟಿ ರೈಡ್ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ನುಗ್ಗಲು ಯತ್ನಿಸಿದ ಬೆಂಬಲಿಗರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕುಮ್ಮಕ್ಕನಿಂದಲೇ ಐಟಿ ದಾಳಿ ನಡೆದಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.