Publish Date: Thu, 27 Aug 2020 (16:15 IST)
Updated Date: Thu, 27 Aug 2020 (16:17 IST)
ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನವರು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡೋದ್ರಲ್ಲಿ ನಿಸ್ಸೀಮರು.
ಅಧಿಕಾರ ಇಲ್ಲದ ಸಂದರ್ಭದಲ್ಲಿ ಕಾಂಗ್ರೆಸ್ ನೀಚ ರಾಜಕಾರಣ ಮಾಡುತ್ತಿರುತ್ತದೆ.
ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಹೊಂದಾಣಿಕೆ ಇಲ್ಲದ ಕಾರಣಕ್ಕಾಗಿಯೇ ಬೆಂಗಳೂರಿನಲ್ಲಿ ಗಲಭೆ ನಡೆದಿದೆ ಎಂದು ದೂರಿದ್ದಾರೆ.