Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ಸಿಗರಲ್ಲಿ ಅಸಮಾಧಾನವಿಲ್ಲ, ಇದೆಲ್ಲಾ ಮಾಧ್ಯಮಗಳ ಸೃಷ್ಠಿ: ಸಿಎಂ

ಕಾಂಗ್ರೆಸ್ಸಿಗರಲ್ಲಿ ಅಸಮಾಧಾನವಿಲ್ಲ, ಇದೆಲ್ಲಾ ಮಾಧ್ಯಮಗಳ ಸೃಷ್ಠಿ: ಸಿಎಂ
ಬೆಂಗಳೂರು , ಮಂಗಳವಾರ, 9 ಮೇ 2017 (20:38 IST)
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಸಭೆಯಲ್ಲಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರದ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಅಭಿಪ್ರಾಯ ಸಂಗ್ರಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ದೂರುಗಳ ಸುರಿಮಳೆಗೈದಿದ್ದಾರೆ ಎಂದು ಖಾಸಗಿ ಚಾನೆಲ್‌ಗಳು ವರದಿ ಮಾಡಿದ್ದವು.
 
ಯಾವುದೇ ಕಾಂಗ್ರೆಸ್ ಮುಖಂಡರು ನನ್ನ ಬಗ್ಗೆಯಾಗಲಿ ಅಥವಾ ಪರಮೇಶ್ವರ್ ಬಗ್ಗೆಯಾಗಲಿ ಅಸಮಾಧಾನ ವ್ಯಕ್ತಪಡಿಸಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಠಿ ಎಂದು ತಳ್ಳಹಾಕಿದರು.
 
ಪುತ್ರ ಡಾ.ಯತೀಂದ್ರ ಚುನಾವಣೆಗೆ ನಿಲ್ಲುತ್ತಾನೆ ಎಂದು ಸುದ್ದಿಯಾಗಿದ್ದ ಕಾರಣ ಆತನ ವಿರುದ್ಧ ಐಟಿ ಇಲಾಖೆಗೆ ದೂರು ಸಲ್ಲಿಸಲಾಗಿದೆ. ಇದು ರಾಜಕೀಯ ವಿರೋಧಿಗಳ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕೈಯಲ್ಲಿ ಕಾನೂನು ತೆಗೆದುಕೊಳ್ಳಬೇಡಿ:ಗೋವು ರಕ್ಷಕರಿಗೆ ಯೋಗಿ ಆದಿತ್ಯ.ನಾಥ್