ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

Sampriya
ಗುರುವಾರ, 24 ಜುಲೈ 2025 (17:44 IST)
ಚಿಕ್ಕಮಗಳೂರು: ಮೂರು ವರ್ಷದಲ್ಲಿ ಎಷ್ಟೂ ದುಡ್ಡು ಮಾಡಲು ಸಾಧ್ಯವಾಗುತ್ತದೆಯೋ ಅಷ್ಟು ಮಾಡಿ, ಅದೇ ದುಡ್ಡಲ್ಲಿ ಮತ್ತೆ ಚುನಾವಣೆ ಮಾಡಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. 

ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಮಾಡಿ ಎಂದು ಕೋರ್ಟ್ ಸೂಚನೆ ನೀಡಿದೆ. ಆದರೆ ಚುನಾವಣೆ ಮಾಡಲು ಸರ್ಕಾರಕ್ಕೆ ಆತ್ಮವಿಶ್ವಾಸವೇ ಇಲ್ಲ ಎಂದು ಕಿಡಿಕಾರಿದರು. 

ಮೈಸೂರಲ್ಲಿ ಅದೆಂತದೋ ಸಾಧನಾ ಸಮಾವೇಶ ಮಾಡಿದ್ದರು. ರಾಜ್ಯದಲ್ಲಿ ಏನು ಸಾಧನೆ ಆಗಿದೆ ಎಂದು ಕಾಂಗ್ರೆಸ್ಸಿಗರೇ ಉತ್ತರ ಕೊಡಬೇಕಿದೆ. ಸಿಎಂ ಕುರ್ಚಿ ಬಗ್ಗೆ ಯಾವುದೇ ಒಳ ಒಪ್ಪಂದವಿಲ್ಲ, ಐದು ವರ್ಷ ನಾನೇ ಸಿಎಂ ಎನ್ನುವ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ, ಜನರ ಕಷ್ಟಕ್ಕಿಂತ ಸಿಎಂ ಕುರ್ಚಿ ಕಿತ್ತಾಟವೇ ಮುಖ್ಯವಾಗಿದೆ ಎಂದರು.

ಸಿಎಂ ಕುರ್ಚಿ ಉಳಿಸಿಕೊಳ್ಳಬೇಕು, ಡಿಸಿಎಂಗೆ ಸಿಎಂ ಕುರ್ಚಿ ಬೇಕು, ಮತ್ತೊಬ್ಬರಿಗೆ ಅಧ್ಯಕ್ಷರ ಕುರ್ಚಿ ಮೇಲೆ ಕಣ್ಣು. ಈ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ಎರಡು ವರ್ಷಗಳ ಇವರ ಆಡಳಿತದ ವೈಖರಿ ನೋಡಿ ಜನ ಚರ್ಚೆ ಮಾಡಲು ಶುರು ಮಾಡಿದ್ದಾರೆ ಎಂದು ನಿಖಿಲ್‌ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments