Publish Date: Tue, 19 Feb 2019 (11:21 IST)
Updated Date: Tue, 19 Feb 2019 (11:22 IST)
ಬೆಂಗಳೂರು : ಶಾಸಕ ಸಿ.ಟಿ.ರವಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಶಾಸಕ ಸಿ.ಟಿ.ರವಿ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಕುಣಿಗಲ್ ತಾಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಾಸಕ ಸಿಟಿ ರವಿ ಕಾರು ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರು ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸ್ನೇಹಿತನೊಬ್ಬ ಶಾಸಕರು ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಆನಂದ್ ಸಿಂಗ್ ಅವರು,’ ಅಪಘಾತದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಟಿವಿ ನೋಡಿ ಬಂದಿದ್ದೇನೆ. ರವಿ ಸಿಗರೇಟ್ ಸೇದಲ್ಲ, ಕುಡಿಯುವುದಿಲ್ಲ ಹಾಗೂ ಅವರು ಗಾಡಿ ಓಡಿಸುವುದಿಲ್ಲ. ರವಿ ಅವರು ಬೆಳಗ್ಗೆ ಎದ್ದು ಯೋಗ ಮಾಡುವವರು. ಈ ರೀತಿ ಅವರು ಏನೂ ಮಾಡಲ್ಲ. ಅವರು ನನ್ನನ್ನು ನೋಡಲು ಬಂದಿದ್ದರು. ಆದ್ದರಿಂದ ಅವರನ್ನು ನೋಡಲು ನಾನು ಹೋಗುತ್ತಿದ್ದೇನೆ’ ಎಂದು ಅವರ ಪರವಾಗಿ ಮಾತನಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.