Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆಯರ ಧರಣಿ ಹಿನ್ನಲೆ; ಸಿಎಂ ಯಡಿಯೂರಪ್ಪರವರ ಕಾಲೆಳೆದ ಕಾಂಗ್ರೆಸ್

Webdunia
ಬುಧವಾರ, 11 ಡಿಸೆಂಬರ್ 2019 (11:36 IST)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ಪ್ರತಿಭಟನೆಯನ್ನು ಕೈಗೊಂಡಿದ್ದು, ಈ ಕುರಿತು ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.


ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಸ್ತೆ ಬದಿಯಲ್ಲಿ ಮಲಗಿ ಧರಣಿ ನಡೆಸುತ್ತಿದ್ದಾರೆ. ಯಾವುದೇ ಸೌಕರ್ಯವಿಲ್ಲದೆ ಪರದಾಡುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ, ಮುಖಂಡರಾಗಲಿ ಅವರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಲಿಲ್ಲ.
 

ಈ ಹಿನ್ನಲೆಯಲ್ಲಿ ಇದೀಗ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಯಡಿಯೂರಪ್ಪ ಎಲ್ಲಿದ್ದೀಯಪ್ಪ? ಹೋರಾಟ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸದೆ ಬಿಜೆಪಿ ಸರ್ಕಾರ ಕೋಮಾದಲ್ಲಿದೆಯಾ? ತುಮಕೂರಿನಲ್ಲಿ ಅನ್ನ ನೀರಿಲ್ಲದೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಮಲಗಿರುವ ಈ ಮಹಿಳೆಯರನ್ನ ನೋಡಿ ನಿಮಗೆ ಸಂಕಟವಾಗದೇನು? ಜಿಲ್ಲಾಡಳಿತದಿಂದ ಈ ಮಹಿಳೆಯರಿಗೆ ಮೂಲಭೂತ ಸೌಕರ್ಯಗಳನ್ನು ಮಾಡಿಕೊಡಿ ಎಂದು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments