ಸ್ಯಾಂಡಲ್ ವುಡ್ ನಿರ್ಮಾಪಕ‌ ಉಮಾಪತಿ ಕೊಲೆಗೆ ಸಂಚು

Webdunia
ಗುರುವಾರ, 16 ಮಾರ್ಚ್ 2023 (18:25 IST)
ಸ್ಯಾಂಡಲ್ ವುಡ್ ನಿರ್ಮಾಪಕ‌ ಉಮಾಪತಿ ಕೊಲೆಗೆ ಸಂಚು ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೆಂಪೇಗೌಡನಗರ ಪೊಲೀಸ್ ಠಾಣೆಯ ರೌಡಿ ರಾಜೇಶ್ ಆಲಿಯಾಸ್ ಕರಿಯಾ ರಾಜೇಶ್ ನನ್ನ‌ ಹೆಡೆಮುರಿಕಟ್ಟಿದ್ದಾರೆ.
ಕೊಲೆ ಯತ್ನ, ದರೋಡೆಗೆ ಸಂಚು, ಗಲಾಟೆ,ಮಾದಕ ವಸ್ತು ಮಾರಾಟ ಸೇರಿದಂತೆ ಏಳೆಂಟು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಸಹಚರನಾಗಿರುವ ರಾಜೇಶ್ ವಿರುದ್ಧ ಐದಕ್ಕೂ ಹೆಚ್ಚು ಜಾಮೀನು ರಹಿತ ವಾರೆಂಟ್ ವಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ರಾಜೇಶ್‌ನನ್ನ ಬಂಧಿಸುವಂತೆ  ಕೋರ್ಟ್ ಆದೇಶಿಸಿತ್ತು.
 
ಹೆಬ್ಬುಲಿ, ರಾಬರ್ಟ್, ಮದಗಜ ಸೇರಿದಂತೆ ಹಲವು ಚಿತ್ರಗಳ ನಿರ್ಮಾಪಕರಾದ ಉಮಾಪತಿ‌ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಕಳೆದ ಎರಡು ವರ್ಷಗಳ ಹಿಂದೆ ಜಯನಗರ ಪೊಲೀಸರು 11 ಮಂದಿ ಆರೋಪಿಗಳ ಪೈಕಿ‌ ರಾಜೇಶ್ ಸಹ ಒಬ್ಬನಾಗಿದ್ದ. ಮಾದಕವಸ್ತು ಮಾರಾಟ, ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ‌ ರೌಡಿ ರಾಜೇಶ್ ಸಕ್ರಿಯನಾಗಿದ್ದ. ಸದ್ಯ ಆರೋಪಿಯನ್ನ‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ