Publish Date: Fri, 22 May 2026 (19:04 IST)
Updated Date: Fri, 22 May 2026 (19:07 IST)
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಿದ್ದು, ನಾವು ಬಹಳ ಎಚ್ಚರಿಕೆಯಿಂದರಬೇಕೆಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್ಎಗಳಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇನ್ನೂ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿರುವುದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ ಎಂದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ