ಕಾನ್ಸ್‌ಟೆಬಲ್ ಸಾವು, ಹಲವರಿಗೆ ಗಾಯ

Webdunia
ಮಂಗಳವಾರ, 4 ಜುಲೈ 2023 (20:00 IST)
ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್‌ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳಿಯಲ್ಲಿ‌ ಕರ್ತವ್ಯದಲ್ಲಿದ್ದ ಸುರೇಶ್ ಮೃತ ಕಾನ್ಸ್‌ಟೇಬಲ್. ದೇವನಹಳ್ಳಿ ಇನ್ಸ್​ಪೆಕ್ಟರ್​ ಧರ್ಮೇಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ‌ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ. ಕಾನ್ಸ್‌ಟೆಬಲ್ ಸುರೇಶ್ ಜೀಪ್​ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಸಮಯಕ್ಕೆ ವೇಗವಾಗಿ ಬಂದ ಇನ್ನೊಂದು ಕಾರು ಸುರೇಶ್ ಅವರಿ​ಗೆ ಡಿಕ್ಕಿಯಾಗಿದೆ. ಬಳಿಕ ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೂ ಗುದ್ದಿದೆ. ಪರಿಣಾಮ ಸುರೇಶ್ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಇನ್ಸ್​ಪೆಕ್ಟರ್‌ಗೆ ಫೋನ್​ ಕಾಲ್​ ಬಂದಿದ್ದು ಮಾತನಾಡಲು ಕೊಂಚ ರಸ್ತೆಬದಿಗೆ ತೆರಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಚಾಲಕನ ಕೈಕಾಲುಗಳಿಗೂ ಗಂಭೀರ ಗಾಯಗಳಾಗಿವೆ. ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೆಬಲ್‌ ಸುರೇಶ್ ದುರ್ಮರಣಕ್ಕೆ ಪೊಲೀಸ್​ ಇಲಾಖೆ ಕಂಬನಿ ಮಿಡಿದಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments