Publish Date: Sat, 18 Aug 2018 (15:51 IST)
Updated Date: Sat, 18 Aug 2018 (16:01 IST)
ದೆಹಲಿಯಲ್ಲಿ ದೇಶದ್ರೋಹಿಗಳು ಸಂವಿಧಾನ ಪ್ರತಿ ಸುಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ನಾಯ್ಕಲ್ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ರಸ್ತೆ ತಡೆದು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದರು. ಸಂವಿಧಾನ ಪ್ರತಿ ಸುಟ್ಟು ಅವಮಾನ ಮಾಡಿದ್ದ ಕಿಡಿಗೇಡಿಗಳನ್ನು ಬಂಧಿಸಬೇಕು. ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಭಾರತ ಸಂವಿಧಾನವನ್ನು ಸುಟ್ಟಿರುವುದು ದೇಶಕ್ಕೆ ಒಳೆಯದಲ್ಲ. ಇಂತಹ ದೇಶ ವಿರೋಧಿಗಳನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.